alex Certify BIG NEWS: ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಶ್ರೀಲಂಕಾದ ಮೂವರು ಮೋಸ್ಟ್ ವಾಂಟೆಡ್ ಕ್ರಿಮಿನಸ್ ಗಳು ಹಾಗೂ ಅವರಿಗೆ ಆಶ್ರಯ ನೀಡಿದ್ದವರನ್ನು ಬಂಧಿಸಲಾಗಿದೆ. ಶ್ರೀಲಂಕಾದ ಕಾಸಿನ್ ಕುಮಾರ್, ಅಮಿಲಾ ನುವಾನ್, ರಂಗ ಪ್ರಸಾದ್ ಹಾಗೂ ಬೆಂಗಳೂರಿನ ಜೈ ಪರಮೇಶ್ ಅಲಿಯಾಸ್ ಜಾಕ್ ಬಂಧಿತರು.

ಪಾತಕಿ ಕಾಸಿನ್ ಕುಮಾರ್ ವಿರುದ್ಧ ಶ್ರೀಲಂಕಾದಲ್ಲಿ 4 ಕೊಲೆ ಪ್ರಕರಣ, ಅಮಿಲಾ ನುವಾನ್ ಮೇಲೆ 5 ಕೊಲೆ ಪ್ರಕರಣಗಳಿವೆ. ರಂಗ ಪ್ರಸಾದ್ ವಿರುದ್ಧ ಹಲ್ಲೆ ಹಾಗೂ ಕೊಲೆ ಕೇಸ್ ಗಳಿವೆ ಎಂದು ತಿಳಿದುಬಂದಿದೆ.

ಬಂಧಿತರ ಬಳಿ ಇದ್ದ 13 ಮೊಬೈಲ್, ಶ್ರೀಲಂಕಾದ ವಿವಿಧ ವಿಸಿಟಿಂಗ್ ಕಾರ್ಡ್, ಬಸ್ ಟಿಕೆಟ್, ಪೇಪರ್ ಕಟ್ಟಿಂಗ್ಸ್, ರೆಂಟಲ್ ಅಗ್ರಿಮೆಂಟ್ ಪ್ರತಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಝೆರಾಕ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...