ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಫಾ ವೈರಸ್ ಆತಂಕದ ನಡುವೆ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಒಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆಯಾಗಿದೆ.
ಆಗಸ್ಟ್ ನಲ್ಲಿ 2,374 ಡೆಂಗ್ಯೂ ಪ್ರಕರಣ ಪತ್ತೆಯಾಗಿತ್ತು. ಸೆಪ್ಟೆಂಬರ್ 1ರಿಂದ ಸೆ.20ರವರೆಗೆ 2,182 ಪ್ರಕರಣಗಳು ಪತ್ತೆಯಾಗಿದ್ದು, ಅಂದರೆ ಪ್ರತಿದಿನ ಸರಾಸರಿ 77ರಿಂದ 190 ಜನರಲ್ಲಿ ಡೆಂಗ್ಯೂ ಪತ್ತೆಯಾಗುತ್ತಿದೆ.
ಕಳೆದ ಒಂದು ತಿಂಗಳಲ್ಲಿ ಬೆಂಗಳೂರು ಪೂರ್ವ, ಬೆಂಗಳೂರು ದಕ್ಷಿಣ ಹಾಗೂ ಮಹದೇವಪುರ ವಲಯಗಳಲ್ಲಿ ಅತಿ ಹೆಚ್ಚು ಡೆಂಗ್ಯೂ ಕೇಸ್ ಪತ್ತೆಯಾಗಿದೆ.
ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಜನವರಿ 1ರಿಂದ ಸೆ.19ರವರೆಗೆ 9,208 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ 5,220 ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಎರಡನೇ ಹಾಗೂ ಮೂರನೇ ಅತಿ ಹೆಚ್ಚು ಡೆಂಗ್ಯೂ ಹರಡಿರುವ ಜಿಲ್ಲೆಗಳೆಂದರೆ ಮೈಸೂರು ಹಾಗೂ ಉಡುಪಿ ಎಂದು ಗುರುತಿಸಲಾಗಿದೆ.
ಈ ವರ್ಷ ರಾಜ್ಯದಲ್ಲಿ ಪತ್ತೆಯಾಗಿರುವ ಡೆಂಗ್ಯೂ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.