ಬೆಂಗಳೂರು ಅಕ್ರಮ ಜಾಹೀರಾತು ಹಾವಳಿ ಹಿನ್ನೆಲೆ ಹೈಕೋರ್ಟ್ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಬೆಂಗಳೂರಿಗೆ ಬಿಬಿಎಂಪಿಯೇ ಮೊದಲ ಶತ್ರುವಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಹೌದು. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಜಾಹೀರಾತು ಫಲಕಗಳ ಹಾವಳಿ ತಡೆಗಟ್ಟಲು ವಿಫಲವಾಗಿರುವ ಪಾಲಿಕೆಯನ್ನು ಸರ್ಕಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಬೆಂಗಳೂರಲ್ಲಿ ಎಷ್ಟು ಅನಧಿಕೃತ ಫ್ಲೆಕ್ಸ್ ಅಳವಡಿಸಲಾಗಿದೆ, ಯಾವ ಕ್ರಮ ಕೈಗೊಳ್ಳಲಾಗಿದೆ, ಜಾಹೀರಾತು ಫಲಕಗಳಿಂದ ಸಂಗ್ರಹವಾದ ಹಣವೆಷ್ಟು? ಅವಧಿ ಮೀರಿದ ಜಾಹೀರಾತುಗಳ ವಿರುದ್ಧ ಕೈಗೊಂಡ ಕ್ರಮವೇನು? ಎಂಬ ಸಂಪೂರ್ಣ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಬಿಎಂಪಿಯೇ ನಗರಕ್ಕೆ ಮೊದಲ ಶತ್ರುವಾಗಿ ಪರಿಣಮಿಸಿದೆ. ಒಂದೆಡೆ ಜಾಹೀರಾತು ಫಲಕಗಳಿಂದ ತೆರಿಗೆ ಸಂಗ್ರಹಿಸುವಲ್ಲಿ ವಿಫಲವಾಗಿದೆ. ಮತ್ತೊಂದೆಡೆ ನಾಗರಿಕರಿಗೆ ಸೌಲಭ್ಯ ಕಲ್ಪಿಸುವಲ್ಲಿಯೂ ಹಣವಿಲ್ಲ ಎಂದು ವೈಫಲ್ಯ ಮೆರೆದಿದೆ ಎಂದು ಹೈಕೋರ್ಟ್ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ನ್ಯಾಯಮೂರ್ತಿ ಪಿ ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಖಡಕ್ ಸೂಚನೆ ನೀಡಿದ್ದು, ನವೆಂಬರ್ 2 ನೇ ವಾರಕ್ಕೆ ವಿಚಾರಣೆ ಮುಂದೂಡಿದೆ.