ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ನಾಳೆ ಕರ್ನಟಕ ಜಲಸಂರಕ್ಷಣಾ ಸಮಿತಿ ಕರೆ ನೀಡಿರುವ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ನಾಳೆ ರಾಜಧಾನಿ ಬೆಂಗಳೂರು ಸಂಪೂರ್ಣ ಬಂದ್ ಆಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು, ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ್ದಾರೆ.