ಬಂಗಾರಪೇಟೆ: ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಎಎಸ್ಐಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ಬಂಗಾರಪೇಟೆಯಲ್ಲಿ ನಡೆದಿದೆ.
ಎಎಸ್ಐ ಫರಿದಾಬಾನು ಅವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾರ್ಖಂಡ್ ಮೂಲದ ಅಜಯ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಚಾಕು ಇರಿತದಿಂದಾಗಿ ಫರಿದಾಬಾನು ಅವರ ಎರಡೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಬಂಗಾರಪೇಟೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.