alex Certify SHOCKING: ಬರ್ತಡೇ ದಿನವೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಬರ್ತಡೇ ದಿನವೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಕೋಲಾರ: ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಹುಟ್ಟುಹಬ್ಬಕ್ಕೆಂದು ಮನೆಯಲ್ಲಿ ಪೋಷಕರು ಹೊಸಬಟ್ಟೆ, ಚಾಕೊಲೇಟ್ ಕೊಡಿಸಿಲ್ಲವೆಂದು ಮುನಿಸಿಕೊಂಡ 9 ನೇ ತರಗತಿ ವಿದ್ಯಾರ್ಥಿನಿ ಮನೆ ಬಿಟ್ಟು ಹೋಗಿದ್ದು, ಆಕೆಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಸಮುದ್ರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶುಕ್ರವಾರ ಹುಟ್ಟುಹಬ್ಬದ ಸಲುವಾಗಿ ಪೋಷಕರು ಹೊಸಬಟ್ಟೆ ಕೊಡಿಸದ ಕಾರಣ ಬಂಗಾರಪೇಟೆ ತಾಲೂಕಿನ ಹುದುಕುಳ ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿ ಮುನಿಸಿಕೊಂಡು ಮನೆ ಬಿಟ್ಟು ಬಂದಿದ್ದಾಳೆ. ಬಂಗಾರಪೇಟೆಗೆ ಬಂದ ಬಾಲಕಿ ಒಬ್ಬಳೇ ಇರುವುದನ್ನು ಗಮನಿಸಿದ ನಾಲ್ವರು ಆರೋಪಿಗಳು ಆಕೆಯನ್ನು ಮಾತನಾಡಿಸಿ ಪಾರ್ಕಿಗೆ ಕರೆದುಕೊಂಡು ಹೋಗಿದ್ದಾರೆ. ಸಂಜೆವರೆಗೂ ಕಾಲಕಳೆದು ನಂತರ ಬಸ್ ನಲ್ಲಿ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ತನಿಮಡಗು ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದಕ್ಕಿಂತ ಮೊದಲು ಬಾರ್ ಒಂದರಲ್ಲಿ ಮದ್ಯಸೇವನೆ ಮಾಡಿದ್ದ ಆರೋಪಿಗಳು ನಿರ್ಜನ ಪ್ರದೇಶಕ್ಕೆ ಬಾಲಕಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ಬಾಲಕಿಯ ಕಿರುಚಾಟ ಕೇಳಿದ ದಾರಿಹೋಕರು ಕಾಮಸಮುದ್ರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಾಲಕಿಯನ್ನು ಬಂಗಾರಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ಒಬ್ಬ ಬಸ್ ಚಾಲಕನಾಗಿದ್ದು, ಮೂವರು ಗಾರೆ ಕೆಲಸ ಮಾಡಿಕೊಂಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...