ಢಾಕಾ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಂಗ್ಲಾ ವಿದ್ಯಾರ್ಥಿಗಳು ಭಾರತದ ದ್ವಜವನ್ನು ತುಳಿದುಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಬಾಂಗ್ಲಾದೇಶ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಗೇಟ್‌ನಲ್ಲಿ ಬಾಂಗ್ಲಾ ವಿದ್ಯಾರ್ಥಿಗಳು ಭಾರತದ ಧ್ವಜ ಚಿತ್ರದ ಮೇಲೆ ಹೆಜ್ಜೆ ಇಟ್ಟು ಸಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಂಗ್ಲಾ ವಿದ್ಯಾರ್ಥಿಗಳ ಈ ಕೃತ್ಯಕ್ಕೆ ಭಾರತೀಯರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರದ ವಿರುದ್ಧ ಇಸ್ಕಾನ್ ಸ್ವಾಮೀಜಿ ಚಿನ್ಮಯ್ ಪ್ರಭು ಸಿಡಿದೆದ್ದು ಬೀದಿಗಿಳಿದು ಹೋರಾಟ ನಡೆಸಿದ್ದರು. ರಂಗ್‌ಪುರದಲ್ಲಿ ನ.22 ರಂದು ಚಿನ್ಮಯ್ ಪ್ರಭು ನೇತೃತ್ವದಲ್ಲಿಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಧ್ವಜ ಹಾರಿಸಲಾಗಿತ್ತು. ಈ ಪ್ರಕರಣದಡಿ ಅವರನ್ನು ಬಾಂಗ್ಲಾ ಸರ್ಕಾರ ಬಂಧಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಬಾಂಗ್ಲಾ ವಿದ್ಯಾರ್ಥಿಗಳು ಭಾರತದ ಧ್ವಜ ಚಿತ್ರವನ್ನು ತುಳಿದು ಉದ್ಧಟತನ ಮೆರೆದಿದ್ದು ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ.