ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲು ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 14 ಲಕ್ಷ ವಿದ್ಯಾರ್ಥಿಗಳಿಗೆ 1000 ಕೋಟಿ ರೂಪಾಯಿ ಪಾವತಿಸಬೇಕಿದೆ.
ಇದುವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳ ಶುಲ್ಕವಾಗಿ ಹಣ ಪಾವತಿಸಲಾಗುತ್ತಿದ್ದು, ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣ ಪಾವತಿಸುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.