alex Certify ಗಮನಿಸಿ…! ನಾಳೆಯಿಂದ ಜೂ. 11 ರ ವರೆಗೆ ಬ್ಯಾಂಕ್ ಸಮಯದಲ್ಲಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ನಾಳೆಯಿಂದ ಜೂ. 11 ರ ವರೆಗೆ ಬ್ಯಾಂಕ್ ಸಮಯದಲ್ಲಿ ಬದಲಾವಣೆ

ಬಳ್ಳಾರಿ: ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಾದ್ಯಂತ ಜಿಲ್ಲಾಡಳಿತ ಈಗಾಗಲೇ ವಿಧಿಸಲಾಗಿರುವ ನಿರ್ಬಂಧಗಳನ್ನು ಸಾರ್ವಜನಿಕರ ಸುರಕ್ಷತಾ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಜೂ.14 ರವರೆಗೆ ಮುಂದುವರಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ‌ಪವನ ಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ಜೂ.7 ರ ಬೆಳಗ್ಗೆ 6 ರಿಂದ ಜೂ. 14 ರ ಬೆಳಗ್ಗೆ 6 ಗಂಟೆಯವರೆಗೆ ಯಥಾಸ್ಥಿತಿಯಾಗಿ ಮುಂದುವರಿಸಲಾಗಿದೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಜೂ.7 ಮತ್ತು 8 ರಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ(ಕಂಟೈನ್‌ಮೆಂಟ್ ಪ್ರದೇಶದ ಹೊರಗಡೆ ಮಾತ್ರ)ಅವಕಾಶ ನೀಡಲಾಗಿದೆ. ಸಾರ್ವಜನಿಕರು ಪಡಿತರವನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ನೇರವಾಗಿ ಪಡೆದುಕೊಳ್ಳಬಹುದಾಗಿರುತ್ತದೆ‌ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ ಗಳು ಸೇರಿದಂತೆ Microfinance, Institutions, Insurance Offices, Co-operative Banks ಗಳಿಗೆ ಜೂ.7 ರಿಂದ ಜೂ. 11 ರವರೆಗೆ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಎಂದಿದ್ದಾರೆ.

ಸಾರ್ವಜನಿಕರಿಗೆ ನಗದು ಲಭ್ಯವಾಗುವಂತೆ ನೋಡಿಕೊಳ್ಳಲು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಾದ್ಯಂತ ಎಲ್ಲಾ ಎಟಿಎಂಗಳನ್ನು 24/7 ಮುಕ್ತವಾಗಿರಿಸಲು ಬ್ಯಾಂಕುಗಳಿಗೆ ಸೂಚಿಸಲಾಗಿದೆ ಹಾಗೂ ಎಟಿಎಂಗಳಲ್ಲಿ ಸಾರ್ವಜನಿಕರಿಗೆ ಅನಕೂಲವಾಗುವಂತೆ Regular Cash Loading ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...