alex Certify BIG NEWS: ಬ್ಯಾಂಕ್ ಸಿಬ್ಬಂದಿ ಕಿರುಕುಳ; ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬ್ಯಾಂಕ್ ಸಿಬ್ಬಂದಿ ಕಿರುಕುಳ; ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವು

ಹುಬ್ಬಳ್ಳಿ: ಸಾಲ ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಗಳು ನೀಡುತ್ತಿದ್ದ ಕಿರುಕುಳಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮಹದೇವಪ್ಪ ಜಾಪೂರ (75) ಮೃತ ದುರ್ದೈವಿ. ಬ್ಯಾಂಕ್ ಸಿಬ್ಬಂದಿಗಳ ದೌರ್ಜನ್ಯಕ್ಕೆ ಕಂಗಾಲಾಗಿದ್ದ ಮಹದೇವಪ್ಪ ಅನಾರೋಗ್ಯದಿಂದ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹದೇವಪ್ಪ ಸಾವನ್ನಪ್ಪಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ನಿವಾಸಿಯಾಗಿದ್ದ ಮಹದೇವಪ್ಪ, ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಆಸ್ಪತ್ರೆಯಲ್ಲಿಯೆ ಕೊನೆಯುಸಿರೆಳೆದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...