5830 ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ನಡೆಯಲಿದೆ. ಪ್ರಾದೇಶಿಕ ಭಾಷಾ ಮಾನ್ಯತೆಯ ನಂತರ ಮೊದಲ ನೇಮಕಾತಿ ಇದಾಗಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನೇಮಕ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಿದೆ.
ಕೇಂದ್ರ ಹಣಕಾಸು ಮಂತ್ರಾಲಯದ ಸೂಚನೆಯಂತೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪದವೀಧರರು ಅರ್ಜಿ ಸಲ್ಲಿಸಬಹುದು. ವಯೋಮಿತಿ ಕನಿಷ್ಠ 20 ವರ್ಷದಿಂದ ಗರಿಷ್ಠ 28 ವರ್ಷವಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಆನ್ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಮಾಹಿತಿ ಮತ್ತು ಅರ್ಜಿ ಸಲ್ಲಿಸಲು www.ibps.in ವೆಬ್ ಸೈಟ್ ಗಮನಿಸಬಹುದಾಗಿದೆ.