alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಗ್ರಾಮೀಣ ಬ್ಯಾಂಕ್ 8106 ಹುದ್ದೆಗಳಿಗೆ ನೇಮಕಾತಿ, ಕನ್ನಡದಲ್ಲೂ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಗ್ರಾಮೀಣ ಬ್ಯಾಂಕ್ 8106 ಹುದ್ದೆಗಳಿಗೆ ನೇಮಕಾತಿ, ಕನ್ನಡದಲ್ಲೂ ಪರೀಕ್ಷೆ

ದೇಶದ 43 ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸ್ ಅಸಿಸ್ಟೆಂಟ್, ಆಫೀಸರ್ ಸೇರಿದಂತೆ 8106 ಹುದ್ದೆಗಳ ನೇಮಕಾತಿ ಪರೀಕ್ಷೆ ಐಬಿಪಿಎಸ್ ಮೂಲಕ ನಡೆಯಲಿದೆ. ಕನ್ನಡ, ಕೊಂಕಣಿ, ಇಂಗ್ಲಿಷ್, ಹಿಂದಿಯಲ್ಲಿಯೂ ಪರೀಕ್ಷೆ ಬರೆಯಬಹುದಾಗಿದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ಹಾಗೂ ಜಿಎಸ್ಟಿ ಕಟ್ಟಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷಚೇತನರು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂಪಾಯಿ ಅರ್ಜಿ ಶುಲ್ಕವಿದೆ. ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಶುಲ್ಕ ಪ್ರತ್ಯೇಕವಾಗಿ ಪಾವತಿಸಬೇಕಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. https://www.ibps.in/ ವೆಬ್ಸೈಟ್ ಮೂಲಕ ಜೂನ್ 27 ರೊಳಗೆ ಹೆಸರು ನೋಂದಾಯಿಸಬೇಕು. 200 ನಗರಗಳಲ್ಲಿ ಪ್ರಿಲಿಮ್ಸ್ ಪರೀಕ್ಷೆ ಆಗಸ್ಟ್ 28, ಸೆಪ್ಟೆಂಬರ್ 3, 4 ರಂದು ಆನ್ಲೈನ್ ಮೂಲಕ ನಡೆಯಲಿದೆ. 80 ನಗರಗಳಲ್ಲಿ ಮುಖ್ಯ ಪರೀಕ್ಷೆ ಅಕ್ಟೋಬರ್ 8 ರಂದು ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...