18 ಖಾತೆ ತೆರೆದು ನಕಲಿ ಚಿನ್ನ ಅಡ ಇಟ್ಟು ಬ್ಯಾಂಕ್ ಗೆ ವಂಚನೆ: ಉಪನ್ಯಾಸಕಿ, ಬ್ಯಾಂಕ್ ಸಿಬ್ಬಂದಿ ಸೇರಿ ನಾಲ್ವರು ಅರೆಸ್ಟ್

ಶಿವಮೊಗ್ಗ: ವಿವಿಧ ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡ ಇಟ್ಟು ಮೋಸ ಮಾಡಿದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

ಶಿವಮೊಗ್ಗದ ಮಲವಗೊಪ್ಪ ನಿವಾಸಿ ಗಗನ್, ಆತನ ಪತ್ನಿ ನಯನಾ, ಅಣ್ಣ ಪವನ್ ಕುಮಾರ್, ಪಕ್ಕದ ಮನೆಯ ನಿವಾಸಿ ಮಂಜುನಾಥ ಅವರನ್ನು ಬಂಧಿಸಲಾಗಿದೆ.

ಇವರು ವ್ಯವಸ್ಥಿತವಾಗಿ ವಿವಿಧ ಬ್ಯಾಂಕುಗಳಲ್ಲಿ 18 ಖಾತೆಗಳನ್ನು ತೆರೆದು ನಕಲಿ ಚಿನ್ನ ಅಡವಿಟ್ಟಿದ್ದಾರೆ. ಪ್ರಸ್ತುತ ಯೂನಿಯನ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಸಿಬ್ಬಂದಿ ದೊಡ್ಡಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಗಗನ್ ಮತ್ತು ಆತನ ಅಣ್ಣ ಪವನ್ ಕುಮಾರ್ ಖಾಸಗಿ ಬ್ಯಾಂಕ್ ನಲ್ಲಿ ಸಿಬ್ಬಂದಿಯಾಗಿದ್ದಾರೆ. ನಯನಾ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು 1.8 ಕೆಜಿ ನಕಲಿ ಚಿನ್ನ ಅಡ ಇಟ್ಟು, 76 ಲಕ್ಷ ರೂ.ಗೂ ಅಧಿಕ ಹಣ ವಂಚಿಸಿರುವುದು ಗೊತ್ತಾಗಿದೆ. ತನಿಖೆ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read