
ಅಂತಹ ಒಂದು ಸಂದಿಗ್ಧ ಸ್ಥಿತಿಯಲ್ಲಿ, ಮೂರು ಆಂಬ್ಯುಲೆನ್ಸ್‌ಗಳು ಅಣ್ಣಾ ಸಲೈನಲ್ಲಿ ಸಿಲುಕಿಕೊಂಡಿದ್ದವು. ರಾಜೀವ್ ಆಸ್ಪತ್ರೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಗಳಲ್ಲಿ, ಚಿಂತಾಜನಕ ಸ್ಥಿತಿಯಲ್ಲಿದ್ದ ರೋಗಿಗಳನ್ನು ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ವಾಹನ ದಟ್ಟಣೆಯಿಂದ ಆ್ಯಂಬುಲೆನ್ಸ್ ಗಳು ಟ್ರಾಫಿಕ್ ನಲ್ಲಿ ಸಿಲುಕಿದ್ದವು. ಈ ಸಂಕಷ್ಟದ ಸ್ಥಿತಿಯನ್ನ ಗಮನಿಸಿದ ಖಾಸಗಿ ಬ್ಯಾಂಕ್ ನ ಮ್ಯಾನೇಜರ್ ಆಗಿರುವ ಜಿನ್ನಾ ಎನ್ನುವವರು ಸಹಾಯಕ್ಕೆ ಮುಂದಾಗಿದ್ದಾರೆ. ತನ್ನ ದ್ವಿಚಕ್ರ ವಾಹನವನ್ನು ನಿಲ್ಲಿಸಿ, ಜಿನ್ನಾ ಮಳೆಯಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ನಡೆದು, ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಟ್ಟಿದ್ದಾರೆ. ಸಕಾಲದಲ್ಲಿ ಆಂಬ್ಯುಲೆನ್ಸ್‌ಗಳು ಆಸ್ಪತ್ರೆ ತಲುಪಿವೆ. ಜಿನ್ನಾ ಅವರ ದೃಢ ನಿರ್ಧಾರದಿಂದ ನಡೆದು ಹೋಗಬೇಕಿದ್ದ ದುರಂತ ತಪ್ಪಿದೆ.
ಜಿನ್ನಾ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿರುವ ಆ್ಯಂಬುಲೆನ್ಸ್ ಚಾಲಕರು ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಮತ್ತೊಬ್ಬ ಆಂಬ್ಯುಲೆನ್ಸ್ ಚಾಲಕರೊಬ್ಬರು ಜಿನ್ನಾ ರಸ್ತೆಗಳನ್ನು ತೆರವುಗೊಳಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದಾರೆ. ಈ ವಿಡಿಯೋ ನೋಡಿರುವ ನೆಟ್ಟಿಗರು ಜಿನ್ನಾರವರ ನಿಸ್ವಾರ್ಥ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.