alex Certify ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಗುಡ್ ನ್ಯೂಸ್: ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಗುಡ್ ನ್ಯೂಸ್: ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿಗೆ ಅರ್ಜಿ

ಬ್ಯಾಂಕ್ ಆಫ್ ಬರೋಡಾದಲ್ಲಿ ಸೀನಿಯರ್ ರಿಲೇಷನ್ ಶಿಪ್ ಮ್ಯಾನೇಜರ್, ಇ – ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ವಿಷಯದಲ್ಲಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

376 ಸೀನಿಯರ್ ರಿಲೇಷನ್ ಶಿಪ್ ಮ್ಯಾನೇಜರ್ ಮತ್ತು 50 ಇ- ವೆಲ್ತ್ ರಿಲೇಷನ್ ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ನವೆಂಬರ್ 19 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 9 ಅರ್ಜಿ ಸಲ್ಲಿಕೆಗೆ, ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಯಾವುದೇ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಸಾಮಾನ್ಯ ಮತ್ತು ಓಬಿಸಿ ವರ್ಗದ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. SC/ ST/ PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಿದ್ದು, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕವೂ ಶುಲ್ಕ ಪಾವತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆ, ವಿವರಗಳಿಗೆ https://www.bankofbaroda.in ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...