ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡಾ ಮುನ್ನೂರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಒಟ್ಟು 325 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಈ ಪೈಕಿ 175 ರಿಲೇಶನ್ಶಿಪ್ ಮ್ಯಾನೇಜರ್ ಮತ್ತು 150 ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳು ಸೇರಿವೆ.
ಅರ್ಹ ಅಭ್ಯರ್ಥಿಗಳು ಜುಲೈ 12 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಬೆಂಗಳೂರಿನಲ್ಲೂ ಪರೀಕ್ಷಾ ಕೇಂದ್ರವನ್ನು ತೆರೆಯಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಇಲ್ಲಿಯೇ ಪರೀಕ್ಷೆ ಬರೆಯುವ ಅವಕಾಶ ಇದೆ.
ಹೆಚ್ಚಿನ ಮಾಹಿತಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.