ಬೆಂಗಳೂರು: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ನಡೆವುದಾಗಿ ಹೇಳಲಾಗಿತ್ತು.
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ -ಐಬಿಪಿಎಸ್ ಈ ಬಗ್ಗೆ ಭರವಸೆ ನೀಡಿತ್ತಾದರೂ, 11 ರಾಷ್ಟ್ರೀಕೃತ ಬ್ಯಾಂಕುಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ. ಕೆನರಾ ಬ್ಯಾಂಕ್ 682 ಹುದ್ದೆಗಳು, ಬ್ಯಾಂಕ್ ಆಫ್ ಇಂಡಿಯಾ 209 ಹುದ್ದೆಗಳು ಸೇರಿದಂತೆ 3300 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ರಾಜ್ಯದಲ್ಲಿನ 407 ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ. ಆದರೆ, ನೇಮಕಾತಿ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಇರುವುದಿಲ್ಲ. ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.