
ಕೋಲಾರ: ಕೆನರಾ ಬ್ಯಾಂಕ್ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಲಾಗಿದೆ. ಕೋಲಾರ ತಾಲೂಕಿನ ಮದ್ದೇರಿ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಘಟನೆ ನಡೆದಿದೆ.
ಗ್ರಾಹಕರು ಅಡವಿಟ್ಟಿದ ಚಿನ್ನ ಮತ್ತು ಠೇವಣಿಯನ್ನು ಬ್ಯಾಂಕ್ ಸಿಬ್ಬಂದಿ ಲಪಟಾಯಿಸಿದ್ದಾರೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ.
ಸಿಬ್ಬಂದಿ ವಂಚನೆಯ ಸಂಬಂಧ ಕೋಲಾರ ಜಿಲ್ಲಾ ಶಾಖೆಯ ಎಜಿಎಂ ಅಶೋಕ್ ಕುಮಾರ್ ವೇಮಗಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬ್ಯಾಂಕ್ ಸಿಬ್ಬಂದಿಯಾದ ರಾವತ್ ಮಹೇಶ್ವರ್, ಇಂದ್ರಜಿತ್ ಸಿಂಗ್, ಮಂಜುನಾಥ್ ಮತ್ತು ಮಧು ಎಂಬುವರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.