ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ (ಎಐಬಿಇಎ) ನವೆಂಬರ್ 19 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಅಂದು ಪ್ರತಿಭಟನೆಯಿಂದಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಬ್ಯಾಂಕ್ ಆಫ್ ಬರೋಡಾ ಸೋಮವಾರ ನಿಯಂತ್ರಕ ಫೈಲಿಂಗ್‌ನಲ್ಲಿ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ ಮುಷ್ಕರದ ನೋಟಿಸ್ ನೀಡಿದ್ದು, ಅವರ ಬೇಡಿಕೆಗಳಿಗೆ ಬೆಂಬಲವಾಗಿ ತಮ್ಮ ಸದಸ್ಯರು 19.11.2022 ರಂದು ಮುಷ್ಕರ ನಡೆಸಲು ಮುಂದಾಗಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರತಿಭಟನೆಯ ದಿನಗಳಲ್ಲಿ ಬ್ಯಾಂಕ್‌ನ ಶಾಖೆಗಳು ಮತ್ತು ಕಚೇರಿಗಳ ಸುಗಮ ಕಾರ್ಯನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಬ್ಯಾಂಕ್ ತಿಳಿಸಿದೆ. ಮುಷ್ಕರವು ಕಾರ್ಯರೂಪಕ್ಕೆ ಬಂದರೆ ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು.
ನವೆಂಬರ್ 19 ತಿಂಗಳ ಮೂರನೇ ಶನಿವಾರ. ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದಂದು ಎಲ್ಲಾ ಬ್ಯಾಂಕ್‌ಗಳು ಮುಚ್ಚಿರುತ್ತವೆ. ಶನಿವಾರ ಬ್ಯಾಂಕ್ ಮುಷ್ಕರ ಹಾಗೂ ಮರುದಿನ ಭಾನುವಾರ ಆಗಿರುವುದರಿಂದ ಎಟಿಎಂಗಳಲ್ಲಿ ಹಣದ ಕೊರತೆ ಎದುರಾಗಬಹುದು. ಹೀಗಾಗಿ ಗ್ರಾಹಕರು ಶುಕ್ರವಾರದೊಳಗೇ ಬ್ಯಾಂಕ್ ಕೆಲಸ ಮುಗಿಸಿಕೊಳ್ಳಬೇಕಾಗುತ್ತದೆ.