ಬೆಂಗಳೂರು: ಕೊಡಗು ಜಿಲ್ಲೆ ಹೊರತಾಗಿ ರಾಜ್ಯಾದ್ಯಂತ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು, ರಾತ್ರಿ 9 ಗಂಟೆವರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.
ಇದೇ ವೇಳೆ ಮದ್ಯಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯದಲ್ಲಿ ಬಾರ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ರಾತ್ರಿ 9 ಗಂಟೆವರೆಗೆ ಮದ್ಯ ಸಿಗಲಿದೆ. ಬಾರ್ ಗಳಲ್ಲಿ ಮದ್ಯಸೇವನೆ ಮಾಡಲು ಅನುಮತಿ ನೀಡಲಾಗಿದೆ.
ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಿಎಂ ಯಡಿಯೂರಪ್ಪ ಜುಲೈ 5 ರಿಂದ 19 ರವರೆಗೆ ಕೆಲವು ಚಟುವಟಿಕೆಗಳ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ತಿಳಿಸಿದ್ದು, ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.