
ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ವರದಿಯಾಗಿರುವ ಭೀಕರ ಘಟನೆಯೊಂದರಲ್ಲಿ ಬಾಲಕಿಯೊಬ್ಬಳು ಹುಡುಗನೊಂದಿಗೆ ಮಾತನಾಡಿದ್ದಕ್ಕೆ ಆಕೆಯ ಮನೆಯವರೇ ಥಳಿಸಿ ಕೊಂದಿದ್ದಾರೆ. 16 ವರ್ಷದ ಸಂತ್ರಸ್ತೆಯ ಮೃತದೇಹವನ್ನು ಹತ್ತಿರದ ಹೊಲದಲ್ಲಿ ಸುಟ್ಟು ಹಾಕಿದ್ದಾರೆ.
ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ನಂತರ ಪೊಲೀಸರು ಹದಿಹರೆಯದ ಹುಡುಗಿಯ ಸುಟ್ಟ ಅವಶೇಷಗಳನ್ನು ವಶಪಡಿಸಿಕೊಂಡರು. ಬಾಲಕಿಯ ತಂದೆ ಸೇರಿದಂತೆ ಕುಟುಂಬದವರು ಸದ್ಯ ತಲೆಮರೆಸಿಕೊಂಡಿದ್ದಾರೆ.
ಕೊಲೆಯ ಬಗ್ಗೆ ಬಾಲಕಿಯ ಕುಟುಂಬದವರು ಶಂಕಿಸಿದ್ದು, ಸಂತ್ರಸ್ತೆಯ ಪೋಷಕರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬಾರಾಬಂಕಿಯ ಕೋಠಿ ಪೊಲೀಸ್ ಠಾಣೆ ವ್ಯಾಪ್ತಿಯ ದೇಧಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಂತ್ರಸ್ತೆ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ದೇಹ ಶೇ 80 ರಷ್ಟು ಸುಟ್ಟಿತ್ತು. ನಂತರ ಪೊಲೀಸರು ಸುಟ್ಟ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.