alex Certify ಕೆರೆ ಸಮೀಪ ಮಹಿಳೆಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆ ಸಮೀಪ ಮಹಿಳೆಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಮಹಿಳೆಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಮಹಿಳೆಯನ್ನು ಗ್ರಾಮದ ವ್ಯಕ್ತಿಯೊಬ್ಬರು ಕೆರೆ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಈಗಾಗಲೇ 3 ಜನ ಇದ್ದರು. ನಾಲ್ವರು ಸೇರಿ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಬಳಿಕ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತ ಮಹಿಳೆ ಆವರ ಕಪಿಮುಷ್ಠಿಯಿಂದ ಪಾರಾಗಿ ಮನೆ ತಲುಪಿದ್ದಾಳೆ.

ಮಹಿಳೆಯ ಪತಿ ಲಕ್ನೋದಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ರೌಡಿಗಳ ಭಯದಿಂದ ಮಹಿಳೆ ಹಲವು ದಿನಗಳಿಂದ ಘಟನೆಯನ್ನು ಯಾರಿಗೂ ಹೇಳಿರಲಿಲ್ಲ. ಅದರ ನಂತರ ಇಂದು ಮಹಿಳೆ ತನ್ನ ಪತಿಗೆ ತನಗಾದ ಸಂಕಷ್ಟವನ್ನು ವಿವರಿಸಿದ್ದಾಳೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪತಿ ಮನೆಗೆ ಆಗಮಿಸಿ ಮಹಿಳೆಯನ್ನು ಕೊತ್ವಾಲಿ ಬಳಿ ಕರೆದೊಯ್ದು ಆರೋಪಿಗಳ ವಿರುದ್ಧ ದೂರು ನೀಡಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

ಬಾರಾಬಂಕಿ ಜಿಲ್ಲೆಯ ಬಡೋಸರಾಯ್ ಕೊಟ್ವಾಲಿ ಪ್ರದೇಶದ ಹಳ್ಳಿಯ ವ್ಯಕ್ತಿಯೊಬ್ಬ ತನ್ನನ್ನು ಕರೆದು ಗ್ರಾಮದ ಹೊರಗಿರುವ ಹೊಂಡದ ಬಳಿ ಕರೆದೊಯ್ದಿದ್ದ ಎಂದು ಮಹಿಳೆ ಆರೋಪಿಸಿದ್ದು, ಮದ್ಯ ಸೇವಿಸಲು ನಿರಾಕರಿಸಿದಾಗ ಆಕೆಗೆ ಥಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನಾಲ್ವರು ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇತರೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳಲ್ಲಿ ಒಬ್ಬ ಮಹಿಳೆಗೆ ಮೊಬೈಲ್ ಕೊಡಿಸಿದ್ದ ಮಾಹಿತಿ ಇದ್ದು, ತನಿಖೆ ಮುಂದುವರೆದಿದೆ. ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪೂರ್ಣೇಂದು ಸಿಂಗ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...