ಕೋಲಾರ : ನಡು ರಸ್ತೆಯಲ್ಲೇ ಗ್ರಾಮ ಪಂಚಾಯ್ತಿ ಸದಸ್ಯನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರಿನ ಕೋಡಿಹಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ.
ಗ್ರಾಮ ಪಂಚಾಯ್ತಿ ಸದಸ್ಯ ಅನಿಲ್(40) ಎಂಬಾತನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.