alex Certify BREAKING : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಕೋಲಾರ : ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರದ ಹೊಗಳಗೆರೆ ರಸ್ತೆಯಲ್ಲಿ ನಡೆದಿದೆ.ಎಂ ಶ್ರೀನಿವಾಸ್ ಅಲಿಯಾಸ್ ಕೌನ್ಸಿಲರ್ ಶ್ರೀನಿವಾಸ ( 62) ಎಂಬುವವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಮೇಲೆ ಹಲ್ಲೆ ನಡೆದಿದ್ದು, 6 ಜನ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದರು.
ಮಾರಣಾಂತಿಕವಾಗಿ ಹಲ್ಲೆಗೊಳಗಾದ ಶ್ರೀನಿವಾಸ್ ಅವರನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ಸ್ಥಳಕ್ಕೆ  ಪೊಲೀಸರು  ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಾಡಹಗಲೇ ನಡೆದ ಕೊಲೆಗೆ ಜನರು ಬೆಚ್ಚಿ ಬಿದ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...