ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಅಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದವರನ್ನು ಗೌಡಪ್ಪಗೌಡ ಪಾಟೀಲ್( 50) ಎಂದು ಗುರುತಿಸಲಾಗಿದೆ. ಹಳೇ ವೈಷಮ್ಯ ಹಿನ್ನೆಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳ ಸಮೇತ ಬಂದು ಗೌಡಪ್ಪಗೌಡನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಭೀಕರ ಹತ್ಯೆಗೆ ಜನರು ಬೆಚ್ಚಿ ಬಿದ್ದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ