ಬೆಂಗಳೂರು : ಮನೆಗೆ ನುಗ್ಗಿ ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಮಾಯಾ ಬಜಾರ ಸ್ಲಂ ನಲ್ಲಿ ನಡೆದಿದೆ.
ಕೊಲೆಯಾದ ರೌಡಿಶೀಟರ್ ನನ್ನು ಸತೀಶ್ ಅಲಿಯಾಸ್ ಮಿಲ್ಟ್ರಿ ಸತೀಶ್ ಎಂದು ಗುರುತಿಸಲಾಗಿದೆ. ಹಳೇ ವೈಷಮ್ಯದ ಹಿನ್ನೆಲೆ ರೌಡಿ ಶೀಟರ್ ಸತೀಶ್ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.