ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮರ್ ವಿರುದ್ಧ ಸಿಬಿಐ ತನಿಖೆ ಆದೇಶ ರಾಜ್ಯ ಸರ್ಕಾರ ವಾಪಾಸ್ ಪಡೆದಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ವಿರುದ್ಧ ಕಿಡಿಕಾರಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲನ್ನು ಏರಿದ್ದರು. ಈಗ ಮತ್ತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.
ಸಿಬಿಐ ತನಿಖೆಗೆ ಅನುಮತಿ ವಾಪಾಸ್ ಪಡೆದಿರುವ ಸರ್ಕಾರದ ಕ್ರಮದ ವಿರುದ್ಧ ನಾನು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ. ಪ್ರತಿದಿನ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಸಿಎಂ ಸಿದ್ದರಾಮಯ್ಯ, ಭ್ರಷ್ಟಾಚಾರಿಯ ರಕ್ಷಣೆಗೆ ನಿಂತಿರುವುದು ದುರಂತ ಎಂದು ಕಿಡಿಕಾರಿದ್ದಾರೆ.
ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಈ ಹಿಂದೆ ಅನುಮತಿ ನೀಡಿತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಿಬಿಐ ತನಿಖೆ ಆದೇಶವನ್ನು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಶಾಸಕ ಯತ್ನಾಳ್ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ.