
ವಿಜಯಪುರ: ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿರುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿದ್ದರಾಮಯ್ಯ ಏನಾದರೂ ಪಾಕಿಸ್ತಾನದ ಮುಖ್ಯಮಂತ್ರಿನಾ? ಅವರನ್ನು ಭೇಟಿಯಾಗದಿರಲು ಎಂದು ಕೇಳಿದ್ದಾರೆ.
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಮುಖ್ಯಮಂತ್ರಿ ಎಂದರೆ ಶಾಸಕರು ಅವರ ಬಳಿ ಹೋಗೋದು ಸಹಜ. ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಬಹಳ ಆತ್ಮೀಯತೆ ಇದೆ ಎಂದಿದ್ದಾರೆ.
ನಾನು ಆಸ್ಪತ್ರೆಯಲ್ಲಿದ್ದಾಗ ಸಿದ್ದರಾಮಯ್ಯ ನನ್ನ ನೋಡಲು ಬಂದಿದ್ದರು. ಸದ್ಯ ಯಾಕೋ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿದ್ದಾರೆ. ಯಾಕೆ ಈಗ ಸೈಲೆಂಟ್ ಆಗಿದ್ದೀರಾ? ಎಂದು ಸಿದ್ದರಾಮಯ್ಯನವರನ್ನು ಕೇಳಿದ್ದೆ. ಏನ್ ಮಾಡೋದು ಯತ್ನಾಳ್ ಇದು ನನ್ನ ಕೊನೇ ಅವಧಿ ಎಂದಿದ್ದರು. ಆದರೆ ಯಾರು ಏನೇ ಹೇಳಲಿ ತಲೆಕೆಡಿಸಿಕೊಳ್ಳಲ್ಲ. ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡುತ್ತೆವೆ ಎಂದು ಹೇಳಿದ್ದರು ಎಂದಿದ್ದಾರೆ.
ಸಾದಾ ಕಾಲ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಇದೀಗ ಸಾಫ್ಟ್ ಆಗಿ ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.