ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಮೇ 2 ರ ನಂತರ ಸಿಎಂ ಬದಲಾವಣೆ ಖಚಿತವೆಂದು ಅವರು ತಿಳಿಸಿದ್ದಾರೆ. ಈ ಹಿಂದೆಯೂ ಹಲವು ಬಾರಿ ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಯತ್ನಾಳ್ ಮಾತನಾಡಿದ್ದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 2 ರ ನಂತರ ಸಿಎಂ ಬದಲಾವಣೆ ಖಚಿತವಾಗಿದ್ದು ಉತ್ತರ ಕರ್ನಾಟಕ ಭಾಗದವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮೇ 2ರ ನಂತರ ಅಧಿಕಾರ ವಹಿಸಿಕೊಳ್ಳಲಿರುವ ಹೊಸ ಮುಖ್ಯಮಂತ್ರಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುತ್ತಾರೆ. ಏಪ್ರಿಲ್ 17 ರ ನಂತರ ಇನ್ನೂ ಹಲವು ಶಾಸಕರು ರೊಚ್ಚಿಗೆ ಹೇಳಲಿದ್ದಾರೆ. ನನಗೆ ನೀಡಲಾಗಿದ್ದ ನೋಟಿಸ್ ಗೆ ಉತ್ತರ ನೀಡಿದ್ದೇನೆ ಎಂದು ಹೇಳಿದ್ದಾರೆ.