ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮೊದಲೇ ಸುಳಿವು ನೀಡಿದ್ದು, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದರು. ಅವರ ಭವಿಷ್ಯ ನಿಜವಾಗಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಿಂಗಾಯಿತ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಶಿಗ್ಗಾಂವಿ ಕ್ಷೇತ್ರದ ಶಾಸಕರಾದ, ಸರ್ಕಾರದಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಹುದ್ದೆ ಒಲಿದು ಬಂದಿದ್ದು, ಈ ಮೂಲಕ ಯಡಿಯೂರಪ್ಪ ನಾಯಕತ್ವವೂ ಬದಲಾವಣೆ ಆಗಿದೆ.
ಬಸವನಗೌಡ ಪಾಟೀಲ್ ಯತ್ನಾಳ್ ನಾಯಕತ್ವ ಬದಲಾವಣೆ ಹಾಗೂ ಉತ್ತರ ಕರ್ನಾಟಕದ ಲಿಂಗಾಯತ ನಾಯಕರಿಗೆ ಸಿಎಂ ಹುದ್ದೆ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಿದ್ದು, ಅವರ ಭವಿಷ್ಯ ನಿಜವಾಗಿದೆ.