alex Certify BIG NEWS: ನಿಜವಾಯ್ತು ಬಿಜೆಪಿ ಶಾಸಕ ಯತ್ನಾಳ್ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಜವಾಯ್ತು ಬಿಜೆಪಿ ಶಾಸಕ ಯತ್ನಾಳ್ ಭವಿಷ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಂದಿನ ಮುಖ್ಯಮಂತ್ರಿ ಬಗ್ಗೆ ಅವರು ನೀಡಿದ್ದ ಹೇಳಿಕೆ ನಿಜವಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಮೊದಲೇ ಸುಳಿವು ನೀಡಿ, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯತ್ನಾಳ್ ಹೇಳಿದ್ದರು. ಅವರ ಭವಿಷ್ಯ ನಿಜವಾಗಿದೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಶಿಗ್ಗಾಂವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಹುದ್ದೆ ಒಲಿದು ಬಂದಿದ್ದು, ಈ ಮೂಲಕ ಯಡಿಯೂರಪ್ಪ ನಾಯಕತ್ವವೂ ಬದಲಾವಣೆ ಆಗಿದೆ. ಹೀಗೆ ನಾಯಕತ್ವ ಬದಲಾವಣೆ ಹಾಗೂ ಉತ್ತರ ಕರ್ನಾಟಕದ ಲಿಂಗಾಯತ ನಾಯಕರಿಗೆ ಸಿಎಂ ಹುದ್ದೆ ಬಗ್ಗೆ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...