alex Certify ನಾಳೆಯಿಂದ ಬಸವನಗುಡಿ ‘ಕಡಲೆಕಾಯಿ ಪರಿಷೆ’ ಆರಂಭ : ಪರಿಷೆಗೆ ಬನ್ನಿ, ಬಟ್ಟೆ ಚೀಲ ತನ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಬಸವನಗುಡಿ ‘ಕಡಲೆಕಾಯಿ ಪರಿಷೆ’ ಆರಂಭ : ಪರಿಷೆಗೆ ಬನ್ನಿ, ಬಟ್ಟೆ ಚೀಲ ತನ್ನಿ

ಬೆಂಗಳೂರು : ನಾಳೆಯಿಂದ ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಆರಂಭವಾಗಲಿದೆ. ಡಿ.9 ರಿಂದ ಡಿ.13 ರವರೆಗೆ ಕಡಲೆಕಾಯಿ ಪರಿಷೆ ನಡೆಯಲಿದ್ದು, ನೀವು ಪ್ಲಾಸ್ಟಿಕ್ ಬ್ಯಾಗ್ ಬಿಟ್ಟು, ಬಟ್ಟೆ ಬ್ಯಾಗ್ ಹಿಡಿದು ಕಡಲೆಕಾಯಿ ಪರಿಷೆಗೆ ಬರಬೇಕು.

ಹೌದು, ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧಿಸಲಾಗಿದೆ. ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಕರೆ ನೀಡಿದ್ದಾರೆ.

ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಬರುವವರು ಪ್ಲಾಸ್ಟಿಕ್ ಬದಲಾಗಿ ಕೈ ಚೀಲಾ ಹಿಡಿದು ಬರಬೇಕು ಎಂದು ಕರೆ ನೀಡಿದರು. ಅದೇ ರೀತಿ ಟ್ರಾಫಿಕ್ ಸಮಸ್ಯೆ ಸೇರಿದಂತೆ ಬಂದ ಜನರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಪ್ರತಿ ವರ್ಷ ನೆಲಗಡಲೆ (ಶೇಂಗಾ) ಬೆಳೆಯುತ್ತಿದ್ದರು. ಆದರೆ ಕಟಾವಿಗೆ ಸಿದ್ಧವಾದ ನೆಲಗಡಲೆಯನ್ನೆಲ್ಲ ಗದ್ದೆಗೆ ದಾಳಿ ಇಡುತ್ತಿದ್ದ ಬಸವವೊಂದು ನಾಶಪಡಿಸುತ್ತಿತ್ತು. ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ರೈತರು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸಿ ಬಸವ (ನಂದಿ)ನನ್ನ ಪ್ರಾರ್ಥಿಸಲು ಆರಂಭಿಸಿದರು. ಬಸವನಗುಡಿ ಪ್ರದೇಶದಲ್ಲಿ ನಂದಿಯ ವಿಗ್ರಹವೊಂದು ದೊರಕಿತು ಮತ್ತು ಈ ಸ್ಥಳದಲ್ಲಿ ಕೆಂಪೇಗೌಡರು 16 ನೇಶತಮಾನದಲ್ಲಿ ನಂದಿಯ ಸುತ್ತಲೂ ದೇವಾಲಯವನ್ನು ನಿರ್ಮಿಸಿದರು. ಇದನ್ನು ಬಸವನ ಗುಡಿ ಅಥವಾ ಬಿಗ್ ಬುಲ್ ಟೆಂಪಲ್ ಎಂದು ಕರೆಯಲಾಗುತ್ತದೆ. ಕಡಲೆ ಕಾಯಿ ಪರಿಷೆ ಈ ದೇವಾಲಯದ ಸುತ್ತ ಕೇಂದ್ರೀಕೃತವಾಗಿದೆ ಮತ್ತು ಬಸವ ರೈತರು ಅರ್ಪಿಸಿದ ನೆಲಗಡಲೆಯನ್ನು ಸ್ವೀಕರಿಸಿ ಆಶೀರ್ವದಿಸುತ್ತಾನೆ ಎಂಬ ನಂಬಿಕೆಯಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...