ಬೆಂಗಳುರು : ನಮ್ಮ ಮೆಟ್ರೋಗೆ ಬಸವಣ್ಣನವರ ಹೆಸರು ಇಡುವಂತೆ ಒತ್ತಾಯಗಳು ಕೇಳಿ ಬರುತ್ತಿದ್ದು, ಈ ಕುರಿತು ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯರನ್ನ ಸಚಿವ ಎಂ. ಬಿ ಪಾಟೀಲ್ ಒತ್ತಾಯಿಸಿದ್ದಾರೆ.
ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರ ಹೆಸರನ್ನು ಬೆಂಗಳೂರಿಗೆ ಇಡಲಾಗಿದೆ. ಹಾಗೆಯೇ ಬಸವೇಶ್ವರ ಹೆಸರನ್ನು ನಮ್ಮ ಮೆಟ್ರೋಗೆ ಇಡಬೇಕು ಎಂದು ಒತ್ತಾಯಿಸಿದರು.
ವಿಜಯಪುರ ಜಿಲ್ಲೆಯನ್ನು ಬಸವೇಶ್ವರ ಜಿಲ್ಲೆ ಎಂದು ಮಾಡಬೇಕು, ವಿಜಯಪುರ ಬಸವಣ್ಣ ಜನಿಸಿದ ಜಿಲ್ಲೆ. ವಿಜಯಪುರವನ್ನ ಬಸವೇಶ್ವರ ಜಿಲ್ಲೆ ಅಂತ ಮಾಡಿದ್ರೆ ಅನಾನುಕೂಲ ಆಗುತ್ತದೆ. ಆದ್ದರಿಂದ ಸಿಎಂ ಜೊತೆ ಚರ್ಚೆ ಮಾಡಿ ಸಾಧಕ-ಬಾಧಕ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ತೀವಿ ಎಂದು ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ.