
ಹುಬ್ಬಳ್ಳಿ : ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ( Basavaraj Bommai) ಸ್ಪಷ್ಟನೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಈ ಬಗ್ಗೆ ಸ್ಪಷ್ಟನೆ ನೀಡಿದರು. ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ವರಿಷ್ಟರು ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ, ನಾನು ಸೋಲಿನ ಹೊಣೆ ಹೊತ್ತುಕೊಂಡಿದ್ದೇನೆ ಎಂದ ಮೇಲೆ ನಾನೇ ಉತ್ತರ ನೀಡಬೇಕಲ್ಲ ಎಂದರು. ಕೆಲವು ಶಾಸಕರ ಸೋಲಿಗೆ ಬೊಮ್ಮಾಯಿ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಹೆಚ್ಚಳ ವರದಿಗೆ ಒಪ್ಪಿಗೆ ನೀಡಿದೆ. ಹಾಗಾಗಿ ವಿದ್ಯುತ್ ದರ ಏರಿಕೆಯಾಗಿದೆ. ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ, ವಿದ್ಯುತ್ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.