ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ.
ಮುಂದಿನ ವರ್ಷ ಚುನಾವಣೆ ನಡೆಯುವುದರಿಂದ 5 ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಭಿವೃದ್ಧಿ ಪರ ಬಜೆಟ್ ಮಂಡನೆಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಕೃಷಿ, ಸಮಾಜಕಲ್ಯಾಣ, ಗ್ರಾಮೀಣಾಭಿವೃದ್ಧಿ, ನೀರಾವರಿ ಸೇರಿದಂತೆ ಐದು ವಲಯಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಅಲ್ಲದೇ, ಹೊಸ ಯೋಜನೆಗಳನ್ನು ಘೋಷಿಸಬಹುದು ಎಂದು ಹೇಳಲಾಗಿದೆ.