ಬೆಂಗಳೂರು: ಬಿಎಸ್ಸಿ ಅಗ್ರಿ ಮತ್ತು ಸರಿ ಸಮಾನ ಕೋರ್ಸ್ ಗಳಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಹೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಬಿಎಸ್ಸಿ ಅಗ್ರಿಕಲ್ಚರ್ ಮತ್ತು ಸರಿ ಸಮಾನ ಕೋರ್ಸ್ ಗಳಲ್ಲಿ ರೈತರ ಮಕ್ಕಳಿಗೆ ಶೇಕಡ 40 ರಿಂದ 50 ರಷ್ಟು ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.
ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ 193.65 ಕೋಟಿ ರೂಪಾಯಿ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.
ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಆಡಳಿತ ಸೌಧ ಮತ್ತು ಇತರೆ ನಿರ್ಮಾಣ ಕಾಮಗಾರಿಗೆ 110 ಕೋಟಿ ರೂಪಾಯಿ ನೀಡಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಮೈಸೂರು ಮೆಡಿಕಲ್ ಕಾಲೇಜಿಗೆ 154 ಕೋಟಿ ರೂ. ಪರಿಷ್ಕೃತ ಯೋಜನೆಗೆ ಅನುಮೋದನೆ ನೀಡಲಾಗಿದೆ. 100 ಪೊಲೀಸ್ ಠಾಣೆಗಳ ನಿರ್ಮಾಣಕ್ಕೆ 200 ಕೋಟಿ ರೂ, ನೀಡಲು ಅನುಮೋದನೆ ನೀಡಲಾಗಿದೆ.
ಅಂಕೋಲ ತಾಲ್ಲೂಕಿನಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಸಾದಿಲ್ವಾರು ನಿಧಿ 2500 ಕೋಟಿ ರೂಪಾಯಿ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ. ಭಟ್ಕಳ ಮತ್ತು ಚಳ್ಳಕೆರೆ ಮಿನಿ ವಿಧಾನಸೌಧ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ ನೀಡಲಾಗಿದೆ.