alex Certify ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಬಸವರಾಜ್ ಬೊಮ್ಮಾಯಿ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 27ರಂದು ನಗರದ ಸಿಂದಗಿ ಶಾಂತ ವೀರೇಶ್ವರ ಆಯುರ್ವೇದಿಕ್ ಕಾಲೇಜು, ಆಸ್ಪತ್ರೆ ಆವರಣದಲ್ಲಿ ಪೂರ್ವಾನುಮತಿ ಪಡೆದುಕೊಳ್ಳದೆ ಬಸವರಾಜ ಬೊಮ್ಮಾಯಿ ಅವರು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿಯ ಸಭೆ ನಡೆಸಿ ಬಿಜೆಪಿಗೆ ಮತ ಹಾಕುವಂತೆ ಪ್ರಭಾವ ಬೀರಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...