ಬೆಂಗಳೂರು: ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತನ್ನ ಲೋಪ ಮುಚ್ಚಿಕೊಳ್ಳಲು ಸುಳ್ಳು ಸುದ್ದಿ ಹರಡುತ್ತಿದೆ. ಮುಖ್ಯಮಂತ್ರಿಗೆ ಶಾಸಕರು ಬರೆದಿದ್ದ ಪತ್ರ ನಕಲಿ ಎಂದು ಘೋಷಿಸಿಬಿಟ್ಟರು. ಪತ್ರಕ್ಕೆ ಯಾರು ಸಹಿ ಹಾಕಿದ್ದರೋ ಅವರನ್ನು ಕರೆದು ಮಾತನಾಡಬೇಕಿತ್ತು. ಅದನ್ನು ಬಿಟ್ಟು ಮಾಧ್ಯಮಗಳಿಗೆ ನೋಟಿಸ್ ನೀಡುತ್ತಿದ್ದೀರಾ ಎಂದು ಕಿಡಿ ಕಾರಿದ್ದಾರೆ.
ಕಾಮಗಾರಿ ಬಿಲ್ ನೀಡುತ್ತಿಲ್ಲ ಎಂದು ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ತನಿಖೆ ನೆಪದಲ್ಲಿ ದೂರು ನೀಡಿದ್ದ ಗುತ್ತಿಗೆದಾರರ ವಿಚಾರಣೆ ಮಾಡಲಾಗುತ್ತಿದೆ. ನಿಮ್ಮ ವಿರುದ್ಧ ದನಿ ಎತ್ತಿದವರ ದನಿ ಅಡಗಿಸಲು ಪ್ರಯತ್ನ ಮಾಡುತ್ತೀರಾ? ರಾಜ್ಯ ಸರ್ಕಾರದ ಇಂತಹ ನಡೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.