
ನವದೆಹಲಿ: ಒಂದು ವಾರದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಅವರು, ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಮತ್ತೊಮ್ಮೆ ಅವರೊಂದಿಗೆ ಚರ್ಚೆ ನಡೆಸಿ ಒಂದು ವಾರದೊಳಗೆ ಸಂಪುಟ ವಿಸ್ತರಣೆ ಮಾಡಲಾಗುವುದು ಎನ್ನಲಾಗಿದೆ.
ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಭೇಟಿಗೆ ಮತ್ತೊಮ್ಮೆ ದೆಹಲಿಗೆ ಬಹುದಾದ ಸಾಧ್ಯತೆ ಇದೆ. ಇಂದಿನ ಭೇಟಿ ಸಂದರ್ಭದಲ್ಲಿ ಕೇಂದ್ರ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತಂತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
ಹಲವು ಸವಾಲುಗಳ ನಡುವೆಯೂ ಜನಪರ, ದಕ್ಷ ಆಡಳಿತ ನೀಡಲಾಗುವುದು. ರೈತರು, ಮಹಿಳೆಯರು, ದೀನ ದಲಿತರು, ಹಿಂದುಳಿದ ವರ್ಗದವರ ತಲಾದಾಯ ಹೆಚ್ಚಳಕ್ಕೆ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.