ಹಾವೇರಿ: ರೈತರ ಆದಾಯ ದ್ವಿಗುಣ ಗೊಳಿಸಲು ಮತ್ತಷ್ಟು ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ಬ್ಯಾಡಗಿಯಲ್ಲಿ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರ ಜನರಿಗೆ ಹತ್ತಿರವಿರುವ ಸರ್ಕಾರವಾಗಿದೆ. ರೈತರ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲಿದೆ. ಇದು ಸಾರ್ವಕಾಲಿಕಾ ಸತ್ಯ ಕೂಡ ಆಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ರೈತ ಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.