alex Certify ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ರೈತರ ಮಕ್ಕಳ ವಿದ್ಯಾನಿಧಿ ಯೋಜನೆ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ರೈತರ ಮಕ್ಕಳ ವಿದ್ಯಾನಿಧಿ ಯೋಜನೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ವ್ಯಾಪ್ತಿಗೆ ಪ್ರೌಢಶಾಲೆ ವಿದ್ಯಾರ್ಥಿನಿಯರನ್ನು ಸೇರ್ಪಡೆ ಮಾಡಲಾಗಿದೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದೆ

ಈ ಯೋಜನೆಯಡಿ ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ಶಿಷ್ಯವೇತನ ನೀಡಲಾಗುವುದು. ಈ ಆದೇಶವನ್ನು ಮಾರ್ಪಾಡು ಮಾಡಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಶಿಷ್ಯವೇತನ ನೀಡಲಾಗುವುದು ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳಿಗೆ ಸೌಲಭ್ಯ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಇರುವುದಿಲ್ಲ. 8 -10ನೇ ತರಗತಿಯ ವಿದ್ಯಾರ್ಥಿನಿಯರಿಗೆ ವಾರ್ಷಿಕ 2000 ರೂಪಾಯಿ ಶಿಷ್ಯವೇತನ ನೀಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಪ್ರೌಢಶಾಲೆಯಲ್ಲಿ ಓದುತ್ತಿರುವ ರೈತರ ಹೆಣ್ಣುಮಕ್ಕಳಿಗೆ ಸೌಲಭ್ಯ ಕಲ್ಪಿಸುವ ಬಗ್ಗೆ ಮಾಹಿತಿ ನೀಡಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...