ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ವಿಚಾರದಲ್ಲಿಯೂ ಗೊಂದಲ ಉಂಟು ಮಾಡುತ್ತಿದೆ. ಯೋಜನೆ ಅನುಷ್ಠಾನ ಮಾಡುವುದರಲ್ಲಿ ಯಾವುದೇ ಸ್ಪಷ್ಟತೆ ಇಲ್ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್ಥಿಕ ಹೊರೆ ಎಷ್ಟಿದೆ ಎಂದು ಗೊತ್ತಿಲ್ಲ. ಬಸ್ ವ್ಯವಸ್ಥೆ ಅಧ್ವಾನವಾಗಿದೆ. ಕೇಂದ್ರ ಸರ್ಕಾರ ತನ್ನ ಪಾಲಿನ 5 ಕೆಜಿ ಅಕ್ಕಿಯನ್ನು ರಾಜ್ಯಕ್ಕೆ ಕೊಡಲಿದೆ. ಕೇಂದ್ರದ ಮೇಲೆ ಕಾಂಗ್ರೆಸ್ ನವರು ಗೂಬೆ ಕೂರಿಸುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರ ಮಾತಿಗೆ ತಪ್ಪಿದ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಜನ ಬಾಯಿಗೆ ಬಂದಂತೆ ಉಗಿಯುತ್ತಿದ್ದಾರೆ. ಕಾಂಗ್ರೆಸ್ ಗೆ ಸರ್ಕಾರ ನಡೆಸುವ ಯೋಗ್ಯತೆ ಇಲ್ಲ. ಕಾಂಗ್ರೆಸ್ ಪಕ್ಷ ರಾಜಕೀಯ ಪ್ರೇರಿತ ಪ್ರತಿಭಟನೆಗೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.