ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.
ಅಕ್ಟೋಬರ್ 16ರಂದು ಮಂಡಿ ನೋವಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ತಪಾಸಣೆ ವೇಳೆ ಹೃದಯದ ಕವಾಟಗಳು ಮುಚ್ಚಿಕೊಂಡಿದ್ದು ಪತ್ತೆಯಾದ ಬಳಿಕ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
ಸಿಎಂ ಸೇರಿದಂತೆ ಹಲವು ಗಣ್ಯರು ಆರೋಗ್ಯ ವಿಚಾರಿಸಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ಬಸವರಾಜ ಬೊಮ್ಮಾಯಿ ಭಾನುವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.