alex Certify ಆಸ್ಪತ್ರೆಯಿಂದ ಮನೆಗೆ ಮರಳಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ರಾಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಿಂದ ಮನೆಗೆ ಮರಳಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ರಾಂತಿ

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.

ಅಕ್ಟೋಬರ್ 16ರಂದು ಮಂಡಿ ನೋವಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ತಪಾಸಣೆ ವೇಳೆ ಹೃದಯದ ಕವಾಟಗಳು ಮುಚ್ಚಿಕೊಂಡಿದ್ದು ಪತ್ತೆಯಾದ ಬಳಿಕ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ಸಿಎಂ ಸೇರಿದಂತೆ ಹಲವು ಗಣ್ಯರು ಆರೋಗ್ಯ ವಿಚಾರಿಸಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ಬಸವರಾಜ ಬೊಮ್ಮಾಯಿ ಭಾನುವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...