alex Certify ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.

ಚುನಾವಣೆ ಘೋಷಣೆಯಾದ ನಂತರ ಸ್ವಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಆಗಮಿಸುತ್ತಿರುವ ಬೊಮ್ಮಾಯಿ ದಿನವಿಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಸವಣೂರು, ಕಾರಡಗಿ, ಶಿಗ್ಗಾಂವಿ ಸೇರಿದಂತೆ ವಿವಿಧಡೆ ಜಿಲ್ಲಾ ಪಂಚಾಯಿತಿವಾರು ಕಾರ್ಯಕರ್ತರ ಜೊತೆ ಚರ್ಚೆ ನಡೆಸಲಿದ್ದಾರೆ. ಸತತ ಮೂರು ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಜಯಗಳಿಸಿದ ಬೊಮ್ಮಾಯಿ ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...