
ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೊ ದಿನದ ಅಂಗವಾಗಿ ರಾಜ್ಯಾದ್ಯಂತ ಇಂದು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಲು ತಿಳಿಸಲಾಗಿದೆ.
ಪೋಲಿಯೊ ಭಾನುವಾರದ ಅಂಗವಾಗಿ ಇಂದು ಬೆಂಗಳೂರಿನಲ್ಲಿ 5 ವರ್ಷದ ಒಳಗಿನ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಯಾನಕ್ಕೆ ಚಾಲನೆ ನೀಡಿದರು. ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಪಂಚಮಸಾಲಿ ಹರಿಹರ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ ಮೊದಲಾದವರಿದ್ದರು.