
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ಸುಳ್ಳು ಹೇಳಿಸುವ ಕೆಲಸ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂಡ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ. ರಾಜ್ಯಪಾಲರ ಭಾಷಣದ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ, ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ. ಸರ್ಕಾರ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದೆ ಎಂದರು.
ಕಾಂಗ್ರೆಸ್ ಸರ್ಕಾರ ಕರ್ನಾಟಕ ಮಾದರಿ ಎಂದು ಬಿಂಬಿಸಿಕೊಂಡಿದೆ. ಕರ್ನಾಟಕ ಮಾದರಿ ಎಂದರೆ ಏನು ಅಂತಾ ಕಾಂಗ್ರೆಸ್ ಹೇಳಲಿ. ಅಭಿವೃದ್ಧಿ ಕೆಲಸ ಮಾಡದೇ ತನ್ನ ಬೆನ್ನು ತಾನೇ ತಟ್ಟಿಕೊಳ್ಳುತ್ತಿದೆ. ರಾಜ್ಯಪಾಲರ ಬಾಯಲ್ಲಿ ಸುಳ್ಳನ್ನು ಹೇಳಿಸಿದೆ ಎಂದು ಕಿಡಿಕಾರಿದ್ದಾರೆ.