alex Certify BIG NEWS: ರಾಜಾರೋಷವಾಗಿ ಹಗಲಲ್ಲೇ ನಡೆಯುತ್ತಿರುವ ಅಕ್ರಮಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ; ಅಪರಾಧಿಗಳನ್ನು ಹಿಡಿಯಲು ಸಿಎಂಗೆ ತಾಕತ್ತಿಲ್ಲ: ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಾರೋಷವಾಗಿ ಹಗಲಲ್ಲೇ ನಡೆಯುತ್ತಿರುವ ಅಕ್ರಮಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ; ಅಪರಾಧಿಗಳನ್ನು ಹಿಡಿಯಲು ಸಿಎಂಗೆ ತಾಕತ್ತಿಲ್ಲ: ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಕರಸೇವಕರನ್ನು ಬಂಧಿಸುವ ಅಗತ್ಯವೇನಿತ್ತು? ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಮ ಮಂದಿರ ಹೋರಾಟದ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಮುಖ ಕೇಂದ್ರವಾಗಿತ್ತು. ಹೀಗಾಗಿ ಅಲ್ಲಿ ಅನೇಕರ ಮೇಲೆ ಪ್ರಕರಣಗಳಿದ್ದವು. ಅವರನ್ನು ಈ ಸಂದರ್ಭದಲ್ಲಿ ಬಂಧಿಸುವ ಅವಶ್ಯಕತೆ ಏನಿತ್ತು? ಎಂದು ಕೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರಿಗೆ ಅಪರಾಧಿಯನ್ನು ಹಿಡಿಯಬೇಕೆಂದರೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡದಲ್ಲಿ ಅಕ್ರಮ ದಂಧೆಯಲ್ಲಿ ತೊಡಗಿರುವ, ಸಾರಾಯಿ ಮಾರಾಟ ಮಾಡುತ್ತಿರುವ ಪ್ರಕರಣಗಳು ಬೇಕಾದಷ್ಟಿವೆ. ರಾಜಾರೋಷವಾಗಿ ಹಗಲಿನಲ್ಲಿಯೇ ಅಕ್ರಮ ದಂಧೆ ನಡೆಯುತ್ತಿವೆ. ಅದೆಲ್ಲವೂ ಇವರಿಗೆ ಕಣ್ಣಿಗೆ ಕಾಣಿಸುತ್ತಿಲ್ಲ. 32 ವರ್ಷದ ಹಿಂದಿನ ಪ್ರಕರಣ ಕಣ್ಣಿಗೆ ಕಂಡಿದೆ. ಕೋರ್ಟ್ ನಲ್ಲಿ ಪ್ರಕರಣ ಇದ್ದರೆ ಶ್ರೀಕಾಂತ್ ಪೂಜಾರಿಯನ್ನು ಬಂಧಿಸುವ ಅಗತ್ಯವೇನಿತ್ತು. ಕರೆದು ವಿಚಾರಣೆ ಮಾಡಿ ಕಳುಹಿಸಬಹುದಿತ್ತು. ಈ ಬಗ್ಗೆ ಕೇಳಿದರೆ ಸಿಎಂ ಬಳಿ ಉತ್ತರವೇ ಇಲ್ಲ ಎಂದು ಕಿಡಿಕಾರಿದರು.

ಅಪರಾಧಿಗಳನ್ನು ಹಿಡಿದರೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇವರಿಗೆ ಅಪರಾಧಿಗಳನ್ನು ಹಿಡಿಯುವ ತಾಕತ್ತಿಲ್ಲ. ಪಿಎಫ್‌ಐ ನಂತಹ ದೇಶದ್ರೋಹಿ ಸಂಘಟನೆಗಳು, ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದಲ್ಲಿ ಭಾಗಿಯಾದವರ ಪ್ರಕಣಗಳನ್ನು ವಾಪಸ್ ಪಡೆಯಲು ನಿಮ್ಮ ಶಾಸಕರು ಪತ್ರ ಬರೆಯುತ್ತಾರೆ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರು ಇವರಿಗೆ ಮುಗ್ದರು. ಆದರೆ, ಕರಸೇವಕರು ಅಪರಾಧಿಗಳಾಗಿ ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಒಬ್ಬ ವ್ಯಕ್ತಿಯನ್ನು ಬಂಧಿಸಲು ಇವರಿಗೆ 32 ವರ್ಷ ಬೇಕಾಯ್ತಾ? ಹುಬ್ಬಳ್ಳಿ ಧಾರವಾಡದಲ್ಲಿ ಅಕ್ರಮ ಇಸ್ಪೀಟ್ ದಂಧೆ ನಡೆಯುತ್ತಿದೆ. ಗೋವಾ, ಮಹಾರಾಷ್ಟ್ರದಿಂದ ಅಕ್ರಮ ಮದ್ಯ ಸರಬರಾಜಾಗುತ್ತಿದೆ. ಅದನ್ನು ತಡೆಯುವುದನ್ನು ಬಿಟ್ಟು ಹುಬ್ಬಳ್ಳಿ ಧಾರವಾಡ ಪೊಲೀಸರು ಕರಸೇವಕರನ್ನು ಬಂಧಿಸಿದ್ದಾರೆ. ಇವರಿಗೆ ಬೇರೆ ಕೆಲಸ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...