ನವದೆಹಲಿ: ಕೇಂದ್ರದ ಬಜೆಟ್ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಸಂಸದ ಬಸವರಾಜ್ ಬೊಮ್ಮಾಯಿ, ಇದು ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಕನಸಿಗೆ ಪೂರಕವಾದ ಬಜೆಟ್ ಎಂದಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಂಸದ ಬೊಮ್ಮಾಯಿ, ಬಜೆ ನಲ್ಲಿ ಮಧ್ಯಮ ವರ್ಗಕ್ಕೆ ಸರ್ಪ್ರೈಸ್ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಇದೊಂದು ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ ಎಂದು ಹೇಳಿದರು.
ಇದೊಂದು ದೂರದೃಷ್ಟಿಯ ವಿಕಸಿತ ಭಾರತ 2047 ರೆಡೆಗೆ ತೆಗೆದುಕೊಂಡು ಹೋಗುವ ಅಭಿವೃದ್ಧಿ ಪರವಾಗಿರುವ ಬಜೆಟ್. ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗೆ ಸಮತೋಲನ ತೆಗೆದುಕೊಂಡು ಹೋಗುವ ಬಜೆಟ್. ಆತ್ಮನಿರ್ಭರ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿಗೆ ಪೂರಕವಾದ ಬಜೆಟ್ ಆಗಿದೆ ಎಂದು ಹೇಳಿದರು.
ಎಲ್ಲರೂ 10 ಲಕ್ಷ ತೆರಿಗೆ ವಿನಾಯಿತಿ ನಿರೀಕ್ಷೆ ಮಾಡಿದ್ದರು. ಆದರೆ, ಪಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 12 ಲಕ್ಷದವರೆಗೆ ತೆರಿಗೆ ವಿನಾಯಿತಿ ನೀಡಿ ಅಚ್ಚರಿ ಕೊಡುಗೆ ನೀಡಿದ್ದಾರೆ ಎಂದರು.
ದುಡಿಯುವ ಕೈಗಳಿಗೆ ವಿಪುಲವಾದಂತ ಅವಕಾಶ ಕೊಟ್ಟಿರುವ ಬಜೆಟ್. ತನ್ನದೇ ತಾಂತ್ರಿಕತೆಗೆ ಸಂಶೋಧನೆಗೆ ವಿಶೇಷವಾಗಿ ಕೃಷಿಯನ್ನು ಆತ್ಮ ನಿರ್ಭರ ಮಾಡುವ ಬಜೆಟ್. ಯೂರಿಯಾ ಗೊಬ್ಬರ, ಬೀಜ, ಉತ್ಪಾದನೆಯಲ್ಲಿ ನಾವು ಸಂಪೂರ್ಣವಾಗಿ ಆತ್ಮನಿರ್ಭರವಾಗಲು ಅವಕಾಶ ನೀಡಲಾಗಿದೆ. ಹಳ್ಳಿಗಾಡಿನಲ್ಲಿ ಸ್ವಯಂ ಉದ್ಯೋಗವಕಾಶ, ಹಳ್ಳಿಗಳಿಂದ ಶಹರಕ್ಕೆ ಹೋಗುವುದನ್ನು ತಡೆಯಲಯ ಕ್ರಮ. ರೈಲ್ವೆ, ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಬಂಡವಾಳ ಹರಿದು ಬರುತ್ತಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಆರೋಗ್ಯ ವಲಯದಲ್ಲಿ ಕ್ಯಾನ್ಸರ್ ನಿಯಂತಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂ. 50 ವರ್ಷಗಳವರೆಗೆ ಬಡ್ಡಿ ರಹಿತ ಸಾಲ ಘೋಷಿಸಲಾಗಿದ್ದು, ಇದರಿಂದ ಕರ್ನಾಟಕಕ್ಕೂ 7ರಿಂದ 8 ಸಾವಿರ ಕೋಟಿ ರೂ. ಸಾಲ ದೊರೆಯುವ ಸಾಧ್ಯತೆ ಇದೆ. 2025-26 ರ ಹೊತ್ತಿಗೆ ಶೇ 7 ರಿಂದ 8 ರ ವರೆಗೆ ಜಿಡಿಪಿ ಅಭಿವೃದ್ಧಿ ನಿರೀಕ್ಷೆ ಮಾಡಬಹುದು. ತೆರಿಗೆಯಲ್ಲಿ ಬಹಳ ಸರಳೀಕರಣ ಮಾಡಲಾಗಿದೆ. ಕಸ್ಟಮ್ಸ್ ನಲ್ಲಿ ಸರಳಿಕರಣ ಮಾಡಲಾಗಿದೆ ಎಂದು ಹೇಳಿದರು.