ಬೆಂಗಳೂರು : ಧಮ್, ತಾಕತ್ ಇದ್ದರೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಇಂದು ಅಕ್ಕಿ ನೀಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
ಅಧಿಕಾರಕ್ಕೆ ಬರುವ ಮುಂಚೆ ನಾವು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು, ಅವರಿಂದ ಈಗ 1 ಕೆಜಿ ಕೊಡೋಕೆ ಆಗಿಲ್ಲ. ಇದುವರೆಗೆ ಜನರಿಗೆ ಪ್ರಧಾನಿ ಮೋದಿ ಅಕ್ಕಿ ನೀಡುತ್ತಿದ್ದರು. ಕಾಂಗ್ರೆಸ್ ನವರಿಗೆ 1 ಕೆಜಿ ಕೂಡ ಕೊಡೋಕೆ ಆಗುತ್ತಿಲ್ಲ. ನಿಮಗೆ ಅಧಿಕಾರ ಕೊಟ್ಟಿದ್ದು ಪ್ರತಿಭಟನೆ ಮಾಡೋಕಾ..? ಬೇಜವಾಬ್ದಾರಿಯ ಸರ್ಕಾರ ಎಂದು ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಇದೀಗ ಮಳೆ ಅಡ್ಡಿಯಾಗಿದ್ದು, ಧಾರಾಕಾರ ಮಳೆ ನಡುವೆಯೂ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಅಕ್ಕಿ ಬೇಯಿಸುವ ಮೂಲಕ ಕಾಂಗ್ರೆಸ್ ಮುಖಂಡರು, ಕಾರ್ಯರ್ತರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ಗೋವಿಂದ ಗೋವಿಂದ ಎಂದು ಕೂಗುತ್ತಾ ಅಕ್ಕಿ ಬೇಯಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದೆ.